ಸಿಹಿ ಮಾತು

ಇದು ಮನಸುಗಳ ಮಾತು

ಗಣರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು…. ಜನವರಿ 25, 2010

ಎಲ್ಲಾ ಭಾರತೀಯರಿಗೆ.......


26 ಜನವರಿ.... ಶುಭಾಷಯಗಳು


ವಂದೇ ಮಾತರಂ…
ಸುಜಲಾಂ ಸುಫಲಾಂ ಮಲಯಜ ಶೀತಲಾಂ
ಸಸ್ಯ ಶ್ಯಾಮಲಾಂ ಮಾತರಂ
ವಂದೇ ಮಾತರಂ….

“ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸಿಹಿಮಾತಿನ ಬಳಗದಿಂದ ನಿಮಗೆಲ್ಲಾ ಹಾರ್ದಿಕ ಶುಭಾಷಯಗಳು”

ಗಣರಾಜ್ಯೋತ್ಸವದ ಬಗ್ಗೆ ಮಾಹಿತಿ ನಿಮಗಾಗಿ ಇಲ್ಲಿ…(Wikipedia ದಿಂದ ಕದ್ದಿದ್ದು)
ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ ೨೬ ರ೦ದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸ೦ವಿಧಾನ ಜಾರಿಗೆ ಬ೦ದು ಭಾರತ ಗಣರಾಜ್ಯವಾದದ್ದು ಜನವರಿ ೨೬, ೧೯೫೦ ರ೦ದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯ೦ತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು೦ಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಪೇರಿ ನಡೆಯುತ್ತದೆ.
ಇತಿಹಾಸ

ಆಗಸ್ಟ್ ೧೫ ೧೯೪೭ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ ೨೯ರಂದು ಡಾ. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಕರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ ೪ ೧೯೪೭ರಂದು ಶಾಸನಸಭೆಯಲ್ಲಿ ಮಂಡಿಸಿತು. ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ ೨೬ ೧೯೫೦ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತದ ಸ್ವಾತ೦ತ್ರ್ಯ ಚಳುವಳಿಯಲ್ಲಿ ಜನವರಿ ೨೬, ೧೯೩೦ ರ೦ದು ಭಾರತ ರಾಷ್ಟ್ರೀಯ ಕಾ೦ಗ್ರೆಸ್ ಪೂರ್ಣ ಸ್ವರಾಜ್ಯದ ಧ್ಯೇಯವನ್ನು ಹಾಕಿಕೊ೦ಡಿತ್ತು. ಲಾಹೋರ್ನಲ್ಲಿ ನಡೆದ ಕಾ೦ಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊ೦ಡು ಈ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎ೦ದು ಘೋಷಿಸಲಾಗಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತ೦ತ್ರ್ಯಾನ೦ತರ ಭಾರತದ ಸ೦ವಿಧಾನವನ್ನು ಈ ದಿನದ೦ದೇ ಜಾರಿಗೆ ತರಲಾಯಿತು.

ನಿಮಗೆ ಇನ್ನೂ ಮಾಹಿತಿಗಳು ಗೊತ್ತದ್ದರೆ ದಯವಿಟ್ಟು ನನ್ನೊಂದಿಗೆ ಸಹಕರಿಸಿ…. Comment ಅಂಕಣ ನಿಮಗಾಗಿ ಕಾಯುತ್ತಿದೆ…

ನಿಮ್ಮವ,
ಕೇಶವ ಪ್ರಸಾದ್ ಮಾರ್ಗ

 

3 Responses to “ಗಣರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು….”

  1. vijay.n Says:

    I am happy about your wishes of ganarajyothsava but the information about this indian democratic function or memory of indian independence, it means ganarajyothsava’s info is not still enough for the student. so for the sake of student knowledge at least more than 2 pages or above that we want the information on indian ganarajyothsava. So finally I wish you happy ganarajyothsava. Its my honourable request please send any other information about this Ganarajyothsava.


Leave a reply to yamanur ಪ್ರತ್ಯುತ್ತರವನ್ನು ರದ್ದುಮಾಡಿ